Copyright 2012 Jog Management Authority. All rights reserved.
    ಜೋಗ ಜಲಪಾತ
    ಜೋಗ ಅಥವ ಗೇರುಸೊಪ್ಪ ಜಲಪಾತ ಪ್ರಪಂಚದ ಪ್ರಸಿದ್ಧ ಜಲಪಾತಗಳಲ್ಲೊಂದು. ಇದು ಭಾರತದ ಅತಿ ಎತ್ತರದ ಜಲಪಾತ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ದಟ್ಟವಾದ ಕಾಡು ಹಾಗು ಗುಡ್ಡಗಳಿಂದ ಆವೃತ್ತವಾದ ಜೋಗ ಕರ್ನಾಟಕದ ಒಂದು ಪ್ರಮುಖ ಪ್ರವಾಸೀ ತಾಣ. ಇಲ್ಲಿ ಸುಮಾರು 292ಮೀ ಎತ್ತರದಿಂದ ಭೋರ್ಗರೆಯುತ್ತಾ ಶರಾವತಿ ನದಿಯು ನಾಲ್ಕು ಸೀಳಾಗಿ ದುಮುಕುತ್ತದೆ.ವೈಭವದಿಂದ ಅವ್ಯಾಹತವಾಗಿ ಧುಮಕುವ ರಾಜ, ಜೋರಾಗಿ ಆರ್ಭಟಿಸುತ್ತ ಹಲವಾರು ಭಾರಿ ಚಿಮ್ಮುತ್ತ ಧುಮಕುವ ರೋರರ್, ಬಳಕುತ್ತಾ ಜಾರುವ ರಾಣಿ(ಲೇಡಿ) ಮತ್ತು ರಭಸದಿಂದ ಹಲವಾರು ಬಂಡೆಗಳನ್ನು ಚಿಮ್ಮುತ್ತಾ ನುಗ್ಗುವ ರಾಕೆಟ್ ಈ ನಾಲ್ಕು ಜಲ ಭಾಗಗಳಾಗಿವೆ. ಮಳೆಗಾಲದಲ್ಲಿ ಅತ್ಯ೦ತ ರಮಣೀಯ ರೂಪ ತೊಡುವ ಈ ಜಲಪಾತ ಬಿಳಿ ಮೋಡಗಳ ಹಿಂದೆ ಕಣ್ಣಾಮುಚ್ಚಾಲೆ ಆಡುತ್ತ ನೋಡುಗರ ಕಣ್ಮನ ಸೆಳೆಯುವುದು.
    ಶರಾವತೀ ನದಿಯ ಜಲಪಾತ  ಗೇರುಸೊಪ್ಪೆ ಎಂದೂ ಪ್ರಸಿದ್ಧ. ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಗಡಿ ಮಧ್ಯೆ ಇರುವ ಈ ಜಲಪಾತ ಸಾಗರ ತಾಲ್ಲೂಕಿನ ತಾಳಗುಪ್ಪ ರೈಲು ನಿಲ್ದಾಣಕ್ಕೆ 16 ಕಿಮೀ ದೂರದಲ್ಲಿದೆ. ಜಲಪಾತ ಶಿವಮೊಗ್ಗದಿಂದ 100 ಕಿಮೀ ದೂರದಲ್ಲೂ, ಹೊನ್ನಾವರದಿಂದ 56 ಕಿಮೀ ದೂರದಲ್ಲೂ ಇದೆ. ಹೆಚ್ಚಿನ ಮಾಹಿತಿಗಾಗಿ...
ಜೋಗದಲ್ಲಿ ಲೇಸರ್ ಲೈಟ್ ಮತ್ತು ಮ್ಯೂಸಿಕಲ್ ಕಾರಂಜಿ ಪ್ರದರ್ಶನವನ್ನು  ಏರ್ಪಡಿಸಲಾಗಿದೆ
ಸಮಯ : ಪ್ರತಿದಿನ ಸಂಜೆ 
7 PM ರಿಂದ 9 PM ರ ವರೆಗೆ.

Web: www.jogfalls.in               e-Mail: jogfalls.jma@gmail.com               Phone: 08183 - 226600, 226601
ಜೋಗ ನಿರ್ವಹಣಾ ಪ್ರಾಧಿಕಾರದ  ವೆಬ್ ಸೈಟ್ 
www.jogfalls.in  ಗೆ ಸ್ವಾಗತ. ಜೋಗ ಮತ್ತು ಸುತ್ತಮುತ್ತಲಿನ ಪ್ರವಾಸಿ ತಾಣಗಳ ಮಾಹಿತಿಯನ್ನು ಪ್ರವಾಸಿಗರ ಅನುಕೂಲಕ್ಕಾಗಿ ಅಳವಡಿಸಲಾಗಿದೆ. ಜೋಗದ ಪ್ರಾಕೃತಿಕ ಸವಿಯನ್ನು ಸವಿಯಲು ನೀವು ಬನ್ನಿ ಹಾಗೂ ನಿಮ್ಮವರನ್ನು ಕರೆತನ್ನಿ.
ನಿಮಗಿದೋ ಸ್ವಾಗತ.
Activities