Web: www.jogfalls.in               e-Mail: jogfalls.jma@gmail.com               Phone: 08183 - 226600, 226601
Copyright 2012 Jog Management Authority. All rights reserved.
    ಈ ಪ್ರದೇಶವು ಕ್ರಿ.ಪೂ. 3ನೇ ಶತಮಾನದಲ್ಲಿ ಸಾಮ್ರಾಟ್ ಅಶೋಕನ ಮೌರ್ಯ ಸಾಮ್ರಾಜ್ಯದ ದಕ್ಷಿಣದ ತುದಿಯಾಗಿದ್ದಿತು. ಮುಂದಿನ ಶತಮಾನಗಳಲ್ಲಿ ಅನೇಕ ರಾಜಮನೆತನಗಳ ಆಳ್ವಿಕೆಯಲ್ಲಿ ಈ ಪ್ರದೇಶ ಇದ್ದಿತು. 4ನೇ ಶತಮಾನದಲ್ಲಿ ಕದಂಬರು, 6ನೇ ಶತಮಾನದಲ್ಲಿ ಚಾಲುಕ್ಯರು ಮತ್ತು ಅವರ ಸಾಮಂತರಾದ ಗಂಗರು, 8ನೇ ಶತಮಾನದಲ್ಲಿ ರಾಷ್ಟ್ರಕೂಟರು, 11ನೇಯದರಲ್ಲಿ ಹೊಯ್ಸಳರು ಮತ್ತು 15ನೇ ಶತಮಾನದಲ್ಲಿ ವಿಜಯನಗರದ ಅರಸರು ಈ ಪ್ರದೇಶವನ್ನು ಆಳಿದೆ ರಾಜಮನೆತನಗಳಲ್ಲಿ ಪ್ರಮುಖರು. ಶಿವಮೊಗ್ಗ ನಗರಕ್ಕೆ ಸ್ವತಂತ್ರ ವ್ಯಕ್ತಿತ್ವ ಬಂದದ್ದು 16ನೇ ಶತಮಾನದ ಕೆಳದಿ ನಾಯಕರ ಆಳ್ವಿಕೆಯಲ್ಲಿ. 17ನೇ ಶತಮಾನದ ನಂತರ ಭಾರತ ಸ್ವಾತಂತ್ರ್ಯದ ವರೆಗೂ ಶಿವಮೊಗ್ಗ ಮೈಸೂರು ಸಂಸ್ಥಾನದ ಭಾಗವಾಗಿದ್ದಿತು.

ಪ್ರವಾಸಿ ತಾಣಗಳು.
ಶಿವಮೊಗ್ಗ.
    ಶಿವಮೊಗ್ಗ ಭಾರತ ದೇಶದ ಕರ್ನಾಟಕ ರಾಜ್ಯದ ಒಂದು ನಗರ. ಇದು ಕರ್ನಾಟಕದ ರಾಜಧಾನಿಯಾದ ಬೆಂಗಳೂರು ನಗರದಿಂದ 275 ಕಿಮೀ ದೂರದಲ್ಲಿದೆ. ಶಿವಮೊಗ್ಗ ಮಹಾನಗರವು ಈ ಜಿಲ್ಲೆಯ ರಾಜಧಾನಿಯಾಗಿದೆ. ಶಿವಮೊಗ್ಗ ಜಿಲ್ಲೆ ಕರ್ನಾಟಕದ ನಿಸರ್ಗಭರಿತ ಮಲೆನಾಡಿನ ಒಂದು ಭಾಗವಾಗಿದೆ. ಸಹ್ಯಾದ್ರಿ ಪರ್ವತಶ್ರೇಣಿ ಮತ್ತು ಅಲ್ಲಿ ಉಗಮಗೊಳ್ಳುವ ನದಿ-ಉಪನದಿಗಳು ಶಿವಮೊಗ್ಗಕ್ಕೆ ಯಥೇಚ್ಛ ನೈಸರ್ಗಿಕ ಸೌಂದರ್ಯವನ್ನು ತಂದುಕೊಟ್ಟಿವೆ. ಶಿವಮೊಗ್ಗದಿಂದ 113 ಕಿಮೀ ದೂರದಲ್ಲಿರುವ ಜಗತ್ಪ್ರಸಿದ್ಧ ಜೋಗದ ಜಲಪಾತ ಪ್ರಕೃತಿಯ ಒಂದು ಅಪೂರ್ವ ದೃಶ್ಯ. ಇಲ್ಲಿ ಶರಾವತಿ ನದಿ 235 ಮೀ ಎತ್ತರದಿಂದ ಸುಮನೋಹರವಾಗಿ ಧುಮುಕುತ್ತದೆ. ರಾಜ, ರಾಣಿ, ರೋರರ್ ಮತ್ತು ರಾಕೆಟ್ ಎಂಬ ನಾಲ್ಕು ವಿಭಿನ್ನ ಪ್ರವಾಹಗಳಾಗಿ ಧುಮುಕುವ ಶರಾವತಿ ಏಷ್ಯದ ಅತಿ ಎತ್ತರದ ಜಲಪಾತವನ್ನು ನಿರ್ಮಿಸಿದೆ. ಮಳೆಗಾಲದ ಸಮಯದಲ್ಲಿ ಕಾಮನ ಬಿಲ್ಲುಗಳನ್ನು ನಿರ್ಮಿಸಿಕೊಂಡು ಅತ್ಯದ್ಭುತ ದೃಶ್ಯವನ್ನು ಜಲಪಾತ ಪ್ರದರ್ಶಿಸುತ್ತದೆ. ತುಂಗಭದ್ರಾ, ಶರಾವತಿ, ಕುಮುದ್ವತಿ ಮತ್ತು ಇತರ ನದಿಗಳಿಂದ ಜಲಸರಬರಾಜಿನ ಸೌಕರ್ಯವುಳ್ಳ ಶಿವಮೊಗ್ಗ ಜಿಲ್ಲೆ ಕರ್ನಾಟಕದ ಅನ್ನದ ಬಟ್ಟಲು ಎನ್ನಿಸಿಕೊಂಡಿದೆ. ಶಿವಮೊಗ್ಗ ಎಂಬ ಹೆಸರು 'ಶಿವ-ಮುಖ' ಎಂಬ ಪದಪುಂಜದಿಂದ ಬಂದದ್ದು. ಇನ್ನೊಂದು ವ್ಯುತ್ಪತ್ತಿಯಂತೆ ಇದು 'ಸಿಹಿ-ಮೊಗೆ' (ಸಿಹಿಯಾದ Moggu) ಎಂದಿದ್ದು ಅದು 'ಶಿವಮೊಗ್ಗ'ವಾಗಿ ಮಾರ್ಪಾಟುಹೊಂದಿದೆ.

Tyavarekoppa Lion and Tiger Safari
Sakrebayalu Elephant Camp
Mandagadde Bird Sanctuary
Koodali
Shivappa Naik Palace
Gajanur Dam


Back